ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದ, ಬೆಂಗಳೂರಿನಲ್ಲಿರುವ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 13 ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ 31 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 9 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು http://rhino.rri.res.in/forms/trainee_eng_2025.php ಪೋರ್ಟಲ್ ಗೆ ಭೇಟಿ ನೀಡಬಹುದಾಗಿದೆ.
ವಿದ್ಯಾರ್ಹತೆ ಏನು?
ನಾಲ್ಕು ವರ್ಷದ ಪದವಿ ಶಿಕ್ಷಣವನ್ನು ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ನಲ್ಲಿ ಶೇ.70ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಯೋಗಾಲಯ ಆಪ್ಟಿಟ್ಯೂಡ್ ಸೇವೆ, ಅನಾಲಾಗ್ ಎಲೆಕ್ಟ್ರಾನಿಕ್ಸ್, ಡಿಜಿಟಲ್ ಎಲೆಕ್ಟ್ರಾನಿಕ್ಸ್, ಪ್ರೋಗ್ರ್ಯಾಮೇಬಲ್ ಮೈಕ್ರೋ ಕಂಟ್ರೋಲರ್ಸ್ ಆರಂಭಿಕ ತಿಳಿವಳಿಕೆ, ಕಂಪ್ಯೂಟರ್ ಪ್ರೋಗ್ರಾಮಿಂಗ್ ಬೇಸಿಕ್ ಮತ್ತು ಅಡ್ವಾನ್ಸ್ ಡ್ ಜ್ಞಾನ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 23 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷದ ಸಡಿಲಿಕೆ ಇದೆ. ಅಭ್ಯರ್ಥಿಗಳ ವಿದ್ಯಾರ್ಹತೆ, ಇತರೆ ಅರ್ಹತಾ ಮಾನದಂಡಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ಲಿಖಿತ ಪರೀಕ್ಷೆ ನಡೆಸಿ, ಕೊನೆಯದಾಗಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಪರೀಕ್ಷೆ ಹಾಗೂ ಸಂದರ್ಶನವನ್ನು ಬೆಂಗಳೂರು ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ನಲ್ಲಿ ನಡೆಸಲಾಗುತ್ತದೆ.