ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಬೆದರಿಕೆ ಆರೋಪಗಳ ಮೇಲೆ ಬಂಧನಕ್ಕೆ ಒಳಗಾಗಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನುಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಎರಡು ದಿನಗಳ ಕಾಲ ವಶಕ್ಕೆ ಪಡೆದಿದ್ದ ಪೊಲೀಸರು ಇಂದು 3ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯವು 14 ದಿನಗಳ ಕಾಲ ಮನುಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.