ಬೆಂಗಳೂರು: ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ 30 ಎಂಎಸ್ಎಂಇ ರಿಲೇಷನ್ ಷಿಪ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಬ್ಯಾಂಕಿನಲ್ಲಿ ಕೆಲಸ ಮಾಡಲು ಇಚ್ಛಿಸುವ ಪದವೀಧರರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಉದ್ಯೋಗ ಪಡೆಯಬಹುದಾಗಿದೆ. ಜೂನ್ 18 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ಮೀಸಲಾತಿ ವರ್ಗೀಕರಣ
ಮೀಸಲಾಗದ ಹುದ್ದೆ 13
ಇಡಬ್ಲ್ಯೂಎಸ್ 03
ಒಬಿಸಿ 08
ಎಸ್ಸಿ 04
ಎಸ್ಟಿ 02
ಒಟ್ಟು 30
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 25 ವರ್ಷ ವಯಸ್ಸಾಗಿರಬೇಕು ಹಾಗೂ 33 ವರ್ಷ ಮೀರಿರಬಾರದು. ಎಸ್ಸಿ, ಎಸ್ಟಿಯವರಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಿನಾಯಿತಿ ಇದೆ. ಅರ್ಜಿ ಸಲ್ಲಿಸುವವರು www.punjabandsindbank.co.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಯಾವುದೇ ಪದವಿ ಪಾಸಾಗಿರಬೇಕು. ಜನರಲ್, ಒಬಿಸಿಯವರಿಗೆ 850 ರೂ. ಹಾಗೂ ಎಸ್ಸಿ, ಎಸ್ಟಿಯವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.