ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಬೆಂಗಳೂರಿನಲ್ಲಿ ಕಚೇರಿ ಹೊಂದಿರುವ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯಲ್ಲಿ (ಇಡಿಐಐ) ನಾಲ್ಕು ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆನ್ ಲೈನ್ ಮೂಲಕ ಏಪ್ರಿಲ್ 27 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಇಡಿಐಐ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸ್ನಾತಕೋತ್ತರ ಪದವಿ, ಎಂಬಿಎ ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 68,200 ರೂ. ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
• ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.ediindia.org/ ಗೆ ಭೇಟಿ ನೀಡಬೇಕು
• ಅಧಿಸೂಚನೆ ಲಿಂಕ್ ನಿಂದ ಯೋಜನಾ ಸಂಯೋಜಕರು ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು.
• ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
• ಅಗತ್ಯ ದಾಖಲೆಗಳೊಂದಿಗೆ hrsro@ediindia.org ಮೇಲ್ ಐಡಿಗೆ ಕಳುಹಿಸಬೇಕು
ಗಮನಿಸಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೇಲ್ ಮಾಡುವಾಗ ಸಬ್ಜೆಕ್ಟ್ ವಿಭಾಗದಲ್ಲಿ “ಅಪ್ಲಿಕೇಶನ್ ಫಾರ್ ಪ್ರಾಜೆಕ್ಟ್ ಕೋ-ಆರ್ಡಿನೇಟರ್-ಆಕ್ಸೆಂಚರ್ ಫಾರ್ ಬೆಂಗಳೂರು ಎಂಬುದಾಗಿ ನಮೂದಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.