ಬೆಂಗಳೂರು: ಬ್ಯಾಂಕಿನಲ್ಲಿ ಉದ್ಯೋಗ ಗಿಟ್ಟಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುವವರಿಗೆ ಸುವರ್ಣಾವಕಾಶ ಇಲ್ಲಿದೆ. ಹೌದು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (Central Bank of India Recruitment 2025) ಸುಮಾರು 4,500 ಹುದ್ದೆಗಳು ಖಾಲಿ ಇವೆ. ಇವುಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಒಳ್ಳೆಯ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 23 ಕೊನೆಯ ದಿನವಾಗಿದೆ.
ಹುದ್ದೆಯ ವಿವರ
ಸಂಸ್ಥೆ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಸಂಖ್ಯೆ : 4,500
ಹುದ್ದೆಯ ಹೆಸರು : ಅಪ್ರೆಂಟಿಸ್ (Apprentice)
ಉದ್ಯೋಗ ಸ್ಥಳ : ದೇಶಾದ್ಯಂತ
ಪ್ರಮುಖ ರಾಜ್ಯಗಳಲ್ಲಿ ಹುದ್ದೆಗಳು
ಕರ್ನಾಟಕ – 105
ತಮಿಳುನಾಡು – 202
ಆಂಧ್ರಪ್ರದೇಶ – 128
ಮಹಾರಾಷ್ಟ್ರ – 586
ಮಧ್ಯಪ್ರದೇಶ – 459
ಉತ್ತರ ಪ್ರದೇಶ – 580
ಪಶ್ಚಿಮ ಬಂಗಾಳ – 315
ಇವು ಅಪ್ರೆಂಟಿಸ್ ಹುದ್ದೆಗಳಾಗಿದ್ದು, ನೇಮಕಾತಿ ಹೊಂದಿದವರಿಗೆ ಮಾಸಿಕ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಒಬಿಸಿಯವರಿಗೆ ಮೂರು ವರ್ಷಗಳ ಸಡಿಲಿಕೆ ಇದ್ದರೆ, ಎಸ್ಸಿ, ಎಸ್ಟಿ ಸಮುದಾಯದವರಿಗೆ ಐದು ವರ್ಷಗಳ ಸಡಿಲಿಕೆ ಇದೆ.
ಆಸಕ್ತ ಅಭ್ಯರ್ಥಿಗಳು https://nats.education.gov.in/ ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ, ಮಹಿಳೆಯರಿಗೆ 600 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದೆಲ್ಲ ಅಭ್ಯರ್ಥಿಗಳಿಗೆ 800 ರೂಪಾಯಿ ಅರ್ಜಿ ಶುಲ್ಕವಿದೆ. 20ರಿಂದ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.