ಬೆಂಗಳೂರು: ಬೆಳಗಾವಿ ಜಿಲ್ಲಾದ್ಯಂತ ಬರೋಬರಿ 558 ಅಂಗನವಾಡಿ ಹುದ್ದೆಗಳ ಭರ್ತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶವಿದೆ. ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನವಾಗಿದೆ. https://karnemakaone.kar.nic.in/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ, ಡಿಪ್ಲೋಮಾ ಓದಿಕೊಂಡಿರಬೇಕು. ಇನ್ನು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ ಎಸ್ಸೆಸ್ಸೆಲ್ಸಿಯ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಬಳಿಕ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು. ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಎಂದು ತಿಳಿಸಲಾಗಿದೆ.
- ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್ ಎಸ್ ಎಲ್ ಸಿ ಅಥವಾ ಪಿಯುಸಿ ಅಂಕಪಟ್ಟಿ
- ವೈಯಕ್ತಿಕ ವಿವರ
- ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ
- ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ
- ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ
- ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
- ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ
- ವಾಸಸ್ಥಳ ದೃಢೀಕರಣ ಪತ್ರ