ಶಿವಮೊಗ್ಗ: 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ನಡೆದಿದೆ.
ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮನೆಯ ಮುಂದೆ ಕಸ ಹಾಕಿರುವುದನ್ನು ಪ್ರಶ್ನಿಸಿದ್ದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
67 ವರ್ಷದ ಹುಚ್ಚಮ್ಮ ಎಂಬ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ. ಪ್ರೇಮ ಎಂಬ ಮಹಿಳೆ ಕಸ ತಂದು ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಮಂಜುನಾಥ್, ದರ್ಶನ್ ಹಾಗೂ ಪ್ರೇಮ ಎಂಬುವವರು ಹುಚ್ಚಮ್ಮಳನ್ನು ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.