ಮಂಡ್ಯ: ಮದುವೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲೇ ಇಂಜಿನಿಯರ್ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಜಿಲ್ಲೆಯ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಹತ್ತಿರ ಈ ಘಟನೆ ನಡೆದಿದೆ. ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ನರೇಗಾ ಮಹಿಳಾ ಇಂಜಿನಿಯರ್ ಸಾವನ್ನಪ್ಪಿದ್ದಾರೆ. ಶರಣ್ಯ ಗೌಡ (25) ಸಾವನ್ನಪ್ಪಿರುವ ಮಹಿಳಾ ಇಂಜಿನಿಯರ್. ಮೂಲತಃ ಮಂಡ್ಯದ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದ ಶರಣ್ಯ, ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಕೆಲಸ ಮುಗಿಸಿ ಸ್ವಗ್ರಾಮ ಬಳೆಹೊನ್ನಿಗನದಿಂದ ಹಲಗೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ತೀವ್ರ ರಕ್ತಸ್ರಾವದಿಂದ ಶರಣ್ಯ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಶರಣ್ಯ ಗೌಡಗೆ ಮುಂದಿನ ತಿಂಗಳು ಫೆಬ್ರವರಿ 16ರಂದು ಮದುವೆ ನಿಶ್ಚಿಯವಾಗಿತ್ತು. ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದಲೇ ದುರಂತ ಅಂತ್ಯ ಕಂಡಿದ್ದಾರೆ. ಈ ಕುರಿತು ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.