ಸ್ಯಾಂಟೊ ಡೊಮಿಂಗೊ: ಡೊಮಿನಿಕನ್ ರಿಪಬ್ಲಿಕ್ ರಾಜಧಾನಿ ಸ್ಯಾಂಟೊ ಡೊಮಿಂಗೊದಲ್ಲಿ ನೈಟ್ಕ್ಲಬ್ ಛಾವಣಿ ಕುಸಿದು ಕನಿಷ್ಠ 79 ಜನರು ಸಾವನ್ನಪ್ಪಿದ್ದು, 155 ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಜೆಟ್ ಸೆಟ್ ನೈಟ್ ಕ್ಲಬ್ ನಲ್ಲಿ ಸಂಭವಿಸಿದ ದುರಂತದಲ್ಲಿ ಜನಪ್ರಿಯ ಗಾಯಕ, ಪ್ರಾಂತೀಯ ಗವರ್ನರ್ ಮತ್ತು ಇಬ್ಬರು ಮಾಜಿ ಮೇಜರ್ ಲೀಗ್ನ ಬೇಸ್ಬಾಲ್ ಆಟಗಾರರಾದ ಆಕ್ಟೇವಿಯೊ ಡೋಟೆಲ್ ಮತ್ತು ಟೋನಿ ಬ್ಲಾಂಕೊ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇನ್ನೂ ಸಾವು -ನೋವುಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ಕಾರ್ಯಾಚರಣೆ ತ್ವರಿತವಾಗಿ ನಡೆಯುತ್ತಿದೆ.