ಬೆಂಗಳೂರು: ಚಂದನವನದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅಗಲಿಕೆಗೆ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಕಂಬನಿ ಮಿಡಿದಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಕಂಬನಿ ಮಿಡಿದ ಜಗ್ಗೇಶ್, ಜನಾರ್ದನ ಹೋಗಿ ಬಾ ಎಂದು X ನಲ್ಲಿ ಕಂಬನಿ ಮಿಡಿದಿದ್ದಾರೆ. ಆತ್ಮೀಯ ಗೆಳೆಯ ಜನಾರ್ದನ ಹೋಗಿ ಬಾ. ನಾವಿಬ್ಬರು ಪಾತ್ರಕ್ಕಾಗಿ ಹಸಿದು ಅಲೆದು ಪಡೆದು ಗೆದ್ದವರು. ನಾನು ನಿನ್ನ ಚಿತ್ರದಲ್ಲಿ ಕರೆಯುತ್ತಿದ್ದ ಬಾಂಡ್ಲಿ ಫಾದರ್ ಪದ ನಿನ್ನ ಓಡನಾಟ ನೆನೆದು ಭಾವುಕನಾದೆ. ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದುಕೊಂಡು ಭಾವುಕರಾಗಿದ್ದಾರೆ.