ಬೆಂಗಳೂರು: ಸ್ಯಾಂಡಲ್ವುಡ್ ನಲ್ಲಿ ಕರಾವಳಿ ಭಾಗದ ಪ್ರತಿಭೆಗಳ ಅಬ್ಬರ ಜೋರಾಗಿ ನಡೆಯುತ್ತಿದೆ. ಎಲ್ಲಾ ಕಾಲಘಟ್ಟಕ್ಕೂ ಒಪ್ಪುವಂತಹ ಕಥಾನಕ ಬಂದರೆ ಖಂಡಿತ ಪ್ರೇಕ್ಷಕರ ಗಮನ ಸೆಳೆಯಬಹುದು ಎಂಬ ನಿಟ್ಟಿನಲ್ಲಿ ಪ್ರೇಕ್ಷಕರ ಮುಂದೆ ಬಂದಂತಹ ತುಳುವಿನ ಚಿತ್ರ “ದಸ್ಕತ್”.
ಈ ಚಿತ್ರ ಮೇ 9ರಂದು ರಾಜ್ಯಾದ್ಯಂತ ತೆರೆಯ ಮೇಲೆ ತರಲು ಪ್ಲಾನ್ ಮಾಡಿಕೊಂಡಿದೆ. ಈ ವಿಚಾರವಾಗಿ ಚಿತ್ರತಂಡ ಕನ್ನಡದ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿತ್ತು.
ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಮಾತನಾಡಿ, ಬಹಳಷ್ಟು ಪೂರ್ವ ತಯಾರಿಯನ್ನು ಮಾಡಿಕೊಂಡು ಈ ದಸ್ಕತ್ ಎಂಬ ಶೀರ್ಷಿಕೆ ಇಟ್ಟುಕೊಂಡು ಚಿತ್ರ ಶುರು ಮಾಡಿದ್ವಿ, ದಸ್ಕತ್ ಅಂದರೆ (ಸಿಗ್ನೇಚರ್) ಸಹಿ ಮಾಡುವುದು ಎಂಬ ಅರ್ಥ. ಒಂದು ಹಳ್ಳಿಯಲ್ಲಿ ಜನ ಸಹಿಗಾಗಿ ಎಷ್ಟು ಕಷ್ಟ ಪಡ್ತಾರೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ ಎಂದಿದ್ದಾರೆ. ನಮ್ಮ ಈ ತುಳು ಚಿತ್ರ ದಸ್ಕತ್ ಬಿಡುಗಡೆಗೊಂಡು ಯಶಸ್ವಿ 70 ದಿನವನ್ನು ಪೂರೈಸಿದೆ. ಹಾಗೆಯೇ ಕೆನಡಾ , ನೈಜೀರಿಯಾ , ದುಬೈ , ಸೇರದಂತೆ ದೇಶದ ನಾನಾ ಭಾಗಗಳನ್ನು ಕೂಡ ನಮ್ಮ ಚಿತ್ರ ಪ್ರದರ್ಶನ ಆಗಿದ್ದು ಇನ್ನು ಹಲವು ದೇಶಗಳಲ್ಲಿ ಪ್ರದರ್ಶನವಾಗಬೇಕಿದೆ ಎಂದಿದ್ದಾರೆ.
ನಿರ್ಮಾಪಕ ಜಗದೀಶ್. ಎನ್. ಅರೇಬನ್ನಿಮಂಗಲ ಮಾತನಾಡಿ, ನಾನು ಒಬ್ಬ ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ ಗ್ರಾಮದ ಕಷ್ಟ ಸುಖಗಳನ್ನ ಚೆನ್ನಾಗಿ ತಿಳಿದುಕೊಂಡು ಪರಿಹಾರ ಕೂಡ ಮಾಡಿದ್ದೇನೆ. ನಮ್ಮ ಹುಡುಗನ ಮೂಲಕ ಈ ಚಿತ್ರದ ಟೀಚರ್ ನೋಡಿದೆ. ನಿರ್ದೇಶಕರನ್ನು ಕರೆಸಿ, ಇಡೀ ಚಿತ್ರವನ್ನು ನೋಡಿದೆ. ನನಗೆ ತುಳು ಬರದಿದ್ದರೂ ಅದರ ಭಾವನೆಗಳ ತುಂಬಾ ಇಷ್ಟವಾಯಿತು. ಹೀಗಾಗಿ ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡಲು ಪ್ಲಾನ್ ಮಾಡಿ ಹೊರ ತರುತ್ತಿದ್ದೇವೆ. ನಿಮ್ಮೆಲ್ಲರ ಸಹಕಾರ ಇರಲಿ ಎಂದರು.
ನಾಯಕನ ಪಾತ್ರಧಾರಿ ದೀಕ್ಷಿತ ಮಾತನಾಡಿ, ಇದು ನನ್ನ ಮೊದಲ ಕನ್ನಡ ಚಿತ್ರ. ಈಗಾಗಲೇ ನಾನು ತುಳು ಭಾಷೆಯಲ್ಲಿ ಮೂರು ಚಿತ್ರವನ್ನು ಮಾಡಿದ್ದೇನೆ. ನನ್ನದು ಶೇಖರ್ ಎಂಬ ಪಾತ್ರ, ಜನರು ನನ್ನ ಪಾತ್ರವನ್ನು ನೋಡಿ ಇಷ್ಟಪಟ್ಟಿದ್ದಾರೆ. ನಮ್ಮ ಈ ಕನ್ನಡ ಚಿತ್ರವನ್ನು ನೋಡಿ ಬೆಂಬಲಿಸಿ ಎಂದರು.
ನಾಯಕಿ ಭವ್ಯ ಪೂಜಾರಿ ಮಾತನಾಡಿ, ಸೀರಿಯಲ್ ಹಾಗೂ ಸಿನಿಮಾ ಸೇರಿದಂತೆ ಸಣ್ಣ ಪುಟ್ಟ ಪಾತ್ರಗಳನ್ನು ಮಾಡಿದ್ದೇನೆ. ಇದೊಂದು ಹಳ್ಳಿ ಹುಡುಗಿಯ ಪಾತ್ರ. ನಿಮ್ಮೆಲ್ಲರ ಪ್ರೀತಿ ಸಹಕಾರ ನಮ್ಮ ಚಿತ್ರದ ಮೇಲೆ ಇರಲಿ ಎಂದರು.
ಸಂಗೀತ ನಿರ್ದೇಶಕ ಸಮರ್ಥನ್. ಎಸ್. ರಾವ್ ಮಾತನಾಡುತ್ತಾ ಈ ಚಿತ್ರದಲ್ಲಿ ಮೂರು ಸಾಂಗ್ ಹಾಗೂ ಮೂರು ಬಿಟ್ಸ್ ಗಳು ಇದ್ದು , ನಮ್ಮ ತಂಡ ಬಹಳ ಶ್ರಮಪಟ್ಟು ಕೆಲಸ ಮಾಡಿದೆ. ಹಾಡುಗಳು ಬಹಳ ಸೊಗಸಾಗಿ ಮೂಡಿ ಬಂದಿದೆ ಎಂದರು.