ಬೆಂಗಳೂರು: ಎನ್ಐಎ ಏವಿಯೇಷನ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ (NIA Aviation Services Recruitment 2025) ಕಂಪನಿಯಲ್ಲಿ 4,787 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಇರುವ ಕಂಪನಿಯ ಘಟಕಗಳಲ್ಲಿ ಕಸ್ಟಮರ್ ಸರ್ವಿಸಸ್ ಅಸೋಸಿಯೇಷನ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಸಂಸ್ಥೆ: ಎನ್ಐಎ ಎವಿಯೇಷನ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್
ಹುದ್ದೆಗಳ ಹೆಸರು: ಗ್ರಾಹಕ ಸೇವೆಗಳ ಅಸೋಸಿಯೇಟ್ (CSA)
ಒಟ್ಟು ಹುದ್ದೆಗಳು: 4,787
ಉದ್ಯೋಗ ಸ್ಥಳ: ದೇಶಾದ್ಯಂತ ಇರುವ ವಿಮಾನ ನಿಲ್ದಾಣಗಳು
ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಕನಿಷ್ಠ 10+2 (ಪಿಯುಸಿ) ಅಥವಾ ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಮಾನ್ಯತೆಯುಳ್ಳ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪ್ರಮಾಣ ಪತ್ರ ಹೊಂದಿರಬೇಕು. ಕನಿಷ್ಠ 18ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷಚೇತನ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 13-25 ಸಾವಿರ ರೂ. ವೇತನ ನೀಡಲಾಗುತ್ತದೆ. ಎಲ್ಲ ವರ್ಗದ ಅಭ್ಯರ್ಥಿಗಳಿಗೆ 400 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ (ಆಫ್ಲೈನ್ ಅಥವಾ ಕಂಪ್ಯೂಟರ್ ಆಧಾರಿತ ಪರೀಕ್ಷೆ) ಮೂಲಕ ನೇಮಕಾತಿ ಮಾಡಲಾಗುತ್ತದೆ. ಅಭ್ಯರ್ಥಿಗಳು www.niaaviationservices.com ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಜೂನ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.