ಬೆಂಗಳೂರು: ಗೀಸರ್ ಬ್ಲಾಸ್ಟ್ ಆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ನಗರದ ಉಲ್ಲಾಳ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಕೀಲರೊಬ್ಬರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆ ಕೆಲಸಕ್ಕೆ ಮಹಿಳೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬ್ಲಾಸ್ಟ್ ನ ತೀವ್ರತೆಗೆ ಮನೆಯ ಕೆಲಸದಾಕೆ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಘಟನೆ ಕಳೆದ ನಾಲ್ಕು ದಿನಗಳ ಹಿಂದೆಯೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.