ಹಾಸನ: ತನ್ನ ಮಗಳನ್ನೇ ಹೆತ್ತ ತಾಯಿಯೊಬ್ಬರು ಕೊಲೆ ಮಾಡಿರುವ ಘಟನೆ ನಡೆದಿದೆ.
ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲೂಕಿನಲ್ಲಿ ಇಂತಹ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ತಾಯಿಯು ತನ್ನ 6 ವರ್ಷದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಬಾಲಕಿಯ ಕೂಗು ಕೇಳಿ ಅಕ್ಕಪಕ್ಕದ ಜಮೀನಿನಲ್ಲಿದ್ದ ಜನ ಓಡಿ ಬಂದು ರಕ್ಷಿಸಿದ್ದಾರೆ.
ಕೂಡಲೇ ಅಸ್ವಸ್ಥಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ ಎನ್ನಲಾಗಿದೆ. ಶ್ವೇತಾ ಕೊಲೆ ಮಾಡಿರುವ ತಾಯಿ. 6 ವರ್ಷದ ಮಗಳು ಸಾನ್ವಿಯನ್ನು ಕ ಲೆ ಮಾಡಿದ್ದಾರೆ. ಶಿವಮೊಗ್ಗ ಮೂಲದ ರಘು ಎಂಬುವರ ಜೊತೆ ಶ್ವೇತಾ ವಿವಾಹವಾಗಿತ್ತು. ಮದುವೆಯಾಗಿ ಎರಡೇ ವರ್ಷಕ್ಕೆ ಪತಿಯಿಂದ ದೂರವಾಗಿದ್ದಳು ಎನ್ನಲಾಗಿದೆ. ಹೀಗಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಏಕಾಏಕಿ ಮಗುವನ್ನು ತಾಯಿಯೇ ಕೊಲೆ ಮಾಡಿದ್ದಾಳೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.