ಬೆಂಗಳೂರು: ವೇಶ್ಯವಾಟಿಕೆ ನಡೆಸುತ್ತಿದ್ದ ಹೈ ಫೈ ಏರಿಯಾದ ಹೈಫೈ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಓರ್ವ ವ್ಯಕ್ತಿಯನ್ನು ಬಂಧಿಸಿ, 7 ಜನ ಯುವತಿಯರನ್ನು ರಕ್ಷಿಸಲಾಗಿದೆ. ಅಶೋಕನಗರ ಪೊಲೀಸ್ ಠಾಣವ್ಯಾಪ್ತಿಯ ರಿಚ್ಮಂಡ್ ಟೌನ್ Pixies spa ಎಂಬ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸ್ವಾತಿ ಎಂಬುವವರಿಗೆ ಈ ಸ್ಪಾ ಸೇರಿದ್ದು ಎನ್ನಲಾಗುತ್ತಿದೆ. ದಾಳಿ ವೇಳೆ ಕೆಲ ಪಶ್ಚಿಮ ಬಂಗಾಳ ಯುವತಿಯರನ್ನು ರಕ್ಷಿಸಲಾಗಿದೆ. ಸಿಸಿಬಿ ಪೊಲೀಸರು ದಾಳಿ ನಡೆಸಿದ ವೇಳೆ ವೇಶ್ಯವಾಟಿಕೆಯಲ್ಲಿ ತೊಡಗಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.