ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆಯಾಗುತ್ತಿದ್ದು, ಜನ – ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನಗಳವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಎಲ್ಲ ಜಿಲ್ಲೆಗಳಲ್ಲೂ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ ತಿಂಗಳಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡಿನಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಜೂನ್ 27ರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.