ಶಿವಮೊಗ್ಗ: ಸಿಗಂದೂರು ತೂಗು ಸೇತುವೆಯ ಸಾಮರ್ಥ್ಯವನ್ನು ಅಧಿಕಾರಿಗಳು ಪರೀಕ್ಷೆ ನಡೆಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಸಾಮರ್ಥ್ಯ ಪರೀಕ್ಷೆ ನಡೆಸಲಾಗಿದೆ. ಜಲ್ಲಿ ಮತ್ತು ಎಂ ಸ್ಯಾಂಡ್ ತುಂಬಿದ ಒಟ್ಟು 15 ಟ್ರಕ್ ಏಕ ಕಾಲಕ್ಕೆ ಬಳಕೆ ಮಾಡುವುದರ ಮೂಲಕ ಪರೀಕ್ಷೆ ನಡೆಸಲಾಯಿತು.
ಸೇತುವೆಯನ್ನು ಸಾರ್ವಜನಿಕ ಬಳಕೆಗೆ ತೆರವುಗೊಳಿಸುವ ಮುನ್ನ ಕಡ್ಡಾಯವಾಗಿ ನಡೆಸಬೇಕಾಗಿರುವ ಪರೀಕ್ಷೆಯನ್ನು ನಡೆಸಲಾಯಿತು. ಒಟ್ಟು 2.25 ಕಿ.ಮೀ.ಉದ್ದದ ಕೇಬಲ್ ಆಧಾರಿತ ಸೇತುವೆ ಇದಾಗಿದೆ. ಶರಾವತಿ ನದಿಗೆ ಅಡ್ಡಲಾಗಿ ಈ ಸೇತುವೆಯನ್ನು ನಿರ್ಮಿಸಲಾಗಿದೆ. ಹೊಳೆಬಾಗಿಲು ಮತ್ತು ಕಳಸವಳ್ಳಿಯನ್ನು ಸಂಪರ್ಕಿಸುವ ಸೇತುವೆಯನ್ನು ನಿರ್ಮಿಸಲಾಗಿದ್ದು, ಸೇತುವೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಪರೀಕ್ಷೆ ನಡೆಸಲಾಯಿತು.