ಪ್ರಸಕ್ತ ಸಾಲಿನ ನಾಡಪ್ರಭು ಕೆಂಪೇಗೌಡ ದಿನಾಚರಣೆ ಕಾರ್ಯಕ್ರಮ ಬಿಬಿಎಂಪಿ ಆವರಣದಲ್ಲಿ ಜೂನ್ 27ರಂದು ಮಧ್ಯಾಹ್ನ 4ಕ್ಕೆ ನಡೆಯಲಿದೆ.
ಪಾಲಿಕೆ ಕೇಂದ್ರ ಕಚೇರಿಯ ಆವರಣದಲ್ಲಿರುವ ಡಾ. ರಾಜಕುಮಾರ್ ಗಾಜಿನ ಮನೆ ಸಭಾಂಗಣದಲ್ಲಿ ಆಚರಿಸಲಾಗುತ್ತಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಗಾಗಲೇ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಬಿಬಿಎಂಪಿ ಪ್ರಕಟಣೆಯಲ್ಲಿ ಕೋರಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಆಗಮಿಸಬಹುದು.