ಬೆಂಗಳೂರು: ನಾಳೆ ನಾಡಪ್ರಭು ಕೆಂಪೇಗೌಡ ಜಯಂತಿ ನಡೆಯುತ್ತಿದ್ದು, ಪ್ರತಿಷ್ಠಿತ ಕೆಂಪೇಗೌಡ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ನಾಡಪ್ರಭು ಕೆಂಪೇಗೌಡ ಜಯಂತಿ ಹೆಸರಿನಲ್ಲಿ ಬಿಬಿಎಂಪಿ ಪ್ರತಿ ವರ್ಷ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ. ಈ ಬಾರಿ ಒಟ್ಟು 52 ಸಾಧಕರನ್ನು ಗುರುತಿಸಿ ಪ್ರಶಸ್ತಿ ಘೋಷಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪಾಲಿಕೆಯಿಂದ ನಗದು ಹಾಗೂ ಪ್ರತಿಷ್ಠಿತ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಈ ಬಾರಿ ಒಟ್ಟು 52 ಸಾಧಕರನ್ನು ಗುರುತಿಸಿ ಪ್ರಶಸ್ತಿ ಘೋಷಿಸಲಾಗಿದೆ. ಸಮಾಜ ಸೇವೆ, ಮಾಧ್ಯಮ, ನ್ಯಾಯವಾದಿ, ಆಡಳಿತ, ವೈದ್ಯಕೀಯ, ಸಾಹಿತ್ಯ ಸೇರಿದಂತೆ ಹಲವು ಕ್ಷೇತ್ರದ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್. ಪಾಟೀಲ್, ಸಿದ್ಧಯ್ಯ ಸೇರಿದಂತೆ ಮಾಧ್ಯಮ ಕ್ಷೇತ್ರದ ಐವರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲಾಗಿದೆ. ನಾಳೆ ಸಂಜೆ ಆರು ಗಂಟೆಗೆ ಬಿಬಿಎಂಪಿ ಗಾಜಿನ ಮನೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.