ಬೆಂಗಳೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವದ ಅಂಗವಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಇಂದು ಬಿಬಿಎಂಪಿ ಕೇಂದ್ರ ಕಚೇರಿಯ ಮುಂಭಾಗದ ಉದ್ಯಾನದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮತ್ತು ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಮಹಾತ್ಯಾಗಿ ಲಕ್ಷ್ಮಿದೇವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಅರ್ಪಿಸಿದರು.
ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ನವೀನ್ ಕುಮಾರ್ ರಾಜು, ವಲಯ ಆಯುಕ್ತ ಸ್ನೇಹಲ್, ಉಪ ಆಯುಕ್ತರು ಆಡಳಿತ ಸೇರಿದಂತೆ ಅಧಿಕಾರಿಗಳು ಇದ್ದರು.