ಹಾಸನ: ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಒಂದೇ ತಿಂಗಳಲ್ಲಿ ಜಿಲ್ಲೆಯಲ್ಲಿ 17 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದರಿಂದಾಗಿ ಜಿಲ್ಲೆಯ ಜನರು ಬೆಚ್ಚಿ ಬಿದ್ದಿದ್ದಾರೆ.
ಹಾಸನದ ಸಿದ್ದೇಶ್ವರ ನಗರದಲ್ಲಿ ಘಟನೆ ನಡೆದಿದೆ. ಗೋವಿಂದ (37) ಹೃದಯಾಘಾತಕ್ಕೆ ಬಲಿಯಾಗಿರುವ ವ್ಯಕ್ತಿ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಾನೇ ಆಟೋ ಚಲಾಯಿಸಿಕೊಂಡು ಆಸ್ಪತ್ರೆಗೆ ಸೇರಿದ್ದ. ಆದರೆ, ಹೃದಯಾಘಾತಕ್ಕೆ (Heart Attack) ಬಲಿಯಾಗಿದ್ದಾರೆ.
ಬೆಳಗ್ಗೆ ಏಳು ಗಂಟೆ ವೇಳೆಗೆ ಆಟೋ ಚಲಾಯಿಸುವಾಗ (Auto Driver) ಗೋವಿಂದಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಲಿಯಾಗಿದ್ದಾರೆ.