ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ನಾಯಿ ಹತ್ಯೆ ಮಾಡಿ ಬಚ್ಚಿಟ್ಟಿರುವ ಆರೋಪವೊಂದು ಕೇಳಿ ಬಂದಿದೆ.
ಮಹದೇವಪುರದ ಚಿನ್ನಪ್ಪ ಲೇಔಟ್ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ನಾಯಿಯನ್ನು ನಾಲ್ಕು ದಿನಗಳ ಹಿಂದೆ ಕತ್ತು ಕೊಯ್ದು ಹತ್ಯೆ ಮಾಡಿ ನಂತರ ನಾಯಿಯನ್ನು ಬಟ್ಟೆಯಿಂದ ಸುತ್ತಿಟಿದ್ದಾಳೆ ಎನ್ನಲಾಗಿದೆ.
ನಾಲ್ಕು ಲ್ಯಾಬ್ರೋಡರ್ ನಾಯಿಗಳನ್ನು ಮಹಿಳೆ ಸಾಕಿದ್ದಳು ಎನ್ನಲಾಗಿದೆ. ನಾಯಿ ಕಳೆಬರ ವಾಸನೆ ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಾಯಿಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ನಾಲ್ಕು ದಿನಗಳ ಹಿಂದೆಯೇ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಬ್ಲ್ಯಾಕ್ ಮ್ಯಾಜಿಕ್ ಗಾಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.