ಹುಬ್ಬಳ್ಳಿ : ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಿ, ಹೈಡ್ರಾಮಾ ಸೃಷ್ಟಿಸಿದ್ದಾರೆ. ಇಂದಿರಾ ಗಾಂಧಿ ಅವರನ್ನು ಹಿಟ್ಲರ್ ಎಂದು ಬಿಂಬಿಸಿದ ವಿಡಿಯೋ ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಇದಕ್ಕೂ ಮುನ್ನ ಕಾಂಗ್ರೆಸ್ ಕಚೇರಿಯಿಂದ ಬಿಜೆಪಿ ಕಚೇರಿವರಗೆ ಪ್ರತಿಭಟನಾ ಮೆರವಣಿಗೆ ಸಾಗಿತು. ಈ ವೇಳೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಬ್ಯಾರಿಕೇಡ್ ಹತ್ತಿ ಬಿಜೆಪಿ ಕಚೇರಿಗೆ ನುಗ್ಗಲು ಯತ್ನಿಸಲಾಯಿತು. ಹೀಗಾಗಿ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.