ಚಿಕ್ಕೋಡಿ: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಅಥಣಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರ ಘೋಷಣೆ ಶೀಘ್ರದಲ್ಲೇ ಆಗಲಿದೆ. ಈಗಾಗಲೇ ಈ ಕುರಿತು ಎಲ್ಲ ತಯಾರಿಗಳು ನಡೆದಿವೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವದವಿದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸಿದೆ. ಪಕ್ಷದ ಒಳಗಡೆ ನೀತಿ ನಿಯಮಾವಳಿಗಳಿವೆ. ಆ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ಘೋಷಣೆಗೆ ಎಲ್ಲಾ ಸಿದ್ಧತೆಗಳು ನಡೆದಿವೆ. ಸದ್ಯದಲ್ಲಿಯೇ ರಾಜ್ಯಾಧ್ಯಕ್ಷರ ಹೆಸರು ಘೋಷಣೆಯಾಗಲಿದೆ ಎಂದಿದ್ದಾರೆ.