ಬೆಳಗಾವಿ : ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಕಂಡೇಯ ನದಿಗೆ ಒಳ ಹರಿವು ಹೆಚ್ಚಾಗಿದೆ.
ಈ ಹಿನ್ನೆಲೆಯಲ್ಲಿ ಗೋಡಚನಮಲ್ಕಿ ಫಾಲ್ಸ್ ತುಂಬಿ ಹರಿಯುತ್ತಿದೆ. ಈ ವೈಭವ ಕಣ್ತುಂಬಿಕೊಳ್ಳಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಗೋಕಾಕ್ ತಾಲೂಕಿನಲ್ಲಿರುವ ಗೋಡಚನಮಲ್ಕಿ ಫಾಲ್ಸ್ ತುಂಬಿ ಹರಿಯುತ್ತಿರುವ ವೈಭವ ಕಣ್ತುಂಬಿಕೊಳ್ಳಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಕಲ್ಲು ಬಂಡೆಗಳ ಮೇಲೆ ಹಾಲು ನೋರೆಯಂತೆ ನೀರು ಹರಿಯುತ್ತಿದ್ದು, ಜಲರಾಶಿ ಎಲ್ಲ ಕಣ್ಮನ ಸೆಳೆಯುತ್ತಿದೆ.