ಚಿಕ್ಕೋಡಿ: ವ್ಯಕ್ತಿಯೋರ್ವ ಕೈಯಲ್ಲಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟು ಹಬ್ಬ ಆಚರಿಸಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಬಾಬಾಜಾನ ಕಾಲೆಮುಂಡಾಸೈ ಎಂಬ ವ್ಯಕ್ತಿ ಬಂದೂಕು ಹಿಡಿದು ಗುಂಡು ಹಾರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾನೆ.
ಗುಂಡು ಹಾರಿಸಿದ ವಿಡಿಯೋ ಸಾಮಾಜೀಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಾಬಾಜಾನ ವಿರುದ್ಧ ಕುಡಚಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶೋಕಿಗೋಸ್ಕರ ಗುಂಡು ಹಾರಿಸಿದ್ದ ಬಾಬಾಜಾನನ್ನು ಪೊಲೀಸರು ಬಂದಿಸಿ ಬಂದೂಕು ಜಪ್ತಿ ಮಾಡಿದ್ದಾರೆ. ಅಲ್ಲದೇ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.