ಬೆಂಗಳೂರು: ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಬೈಕ್ ನಲ್ಲಿ ಬಂದಿದ್ದ ಇಬ್ಬರು ಖದೀಮರು ಮಹಿಳೆಯ ಚಿನ್ನದ ಮಾಂಗಲ್ಯ ಸರ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.
ಹೊಸಕೋಟೆಯ ಕುವೆಂಪು ನಗರದ ಮಹಿಳೆಯ ಸರ ಕದ್ದು ಖದೀಮರು ಪರಾರಿಯಾಗಿದ್ದಾರೆ. ಕಳೆದ 23 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ನಲ್ಲಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಇಬ್ಬರು ಖದೀಮರು ಈ ಕೃತ್ಯ ಎಸಗಿದ್ದಾರೆ.
ಈ ವೇಳೆ ಮಹಿಳೆ ಒಬ್ಬಳೇ ಇರುವುದನ್ನು ಕಂಡು ಕುತ್ತಿಗೆಯಲ್ಲಿದ್ದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸರಗಳ್ಳತನ ಮಾಡಿ ಪರಾರಿಯಾಗುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಯ ಕೊರಳಲ್ಲಿದ್ದ 40 ಗ್ರಾಂ ಚಿನ್ನದ ಸರ ಕದ್ದು ಖದೀಮರು ಪರಾರಿಯಾಗಿದ್ದಾರೆ. ಹೊಸಕೋಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.