ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಸಚಿವ ಸಂಪುಟದಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೌಕರರು ಕಾತುರದಿಂದ ನಿರೀಕ್ಷಿಸುತ್ತಿದ್ದ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಆಗಸ್ಟ್ 1ರಿಂದಲೇ ಜಾರಿಯಾಗಲಿದೆ. ಶೇ 27.5 ವೇತನ ಪರಿಷ್ಕರಣೆ ಮಾಡಿದ ವರದಿಯನ್ನು ಮಾರ್ಚ್ 16 ರಂದು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿತ್ತು. ಹೀಗಾಗಿ ಸಿಎಂ ಹಣಕಾಸು ಇಲಾಖೆಯ ಮಾಹಿತಿ ಕೇಳಿದ್ದರು.
ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ್ದಾರೆ. ಸಚಿವ ಸಂಪುಟದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ವೇತನ ಆಯೋಗ ವರದಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಸಿಎಂ ಆ ವೇಳೆ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ.
ಸಂಪನ್ಮೂಲ ಕೊರತೆ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸಲಹೆ ಆಧರಿಸಿ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ತೀರ್ಮಾನವನ್ನು ರಾಜ್ಯ ಸರ್ಕಾರ ಮುಂದೂಡುತ್ತಾ ಬಂದಿತ್ತು. ಹೀಗಾಗಿ ನೌಕರಸ್ಥರು ಹೋರಾಟದ ಎಚ್ಚರಿಕೆ ನೀಡಿದ್ದರು. ಈಗ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಆಗಸ್ಟ್ ಒಂದರಿಂದ 7 ನೇ ವೇತನ ಆಯೋಗ ಜಾರಿ ಮಾಡುವ ಕುರಿತು ಸಂಪುಟ ನಿರ್ಣಯ ಕೈಗೊಂಡಿದೆ.