ನವದೆಹಲಿ: ರಾಜ್ಯದ 96 ವರ್ಷದ ವೃದ್ಧೆಯೊಬ್ಬರು ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ.
ಕೊಪ್ಪಳ ತಾಲೂಕಿನ 96 ವರ್ಷದ ಗೊಂಬೆಯಾಟ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಪದ್ಮಶ್ರೀ ಪ್ರಶಸ್ತಿ ಪಡೆದವರು. ಅವರು ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಇಂದು ಪದ್ಮಶ್ರೀ (Padma Shri Award) ಪ್ರಶಸ್ತಿ ಸ್ವೀಕರಿಸಿದ್ದಾರೆ. ತೊಗಲುಗೊಂಬೆಯಾಟ ಎಂಬ ಗ್ರಾಮೀಣ ಹಾಗೂ ಪುರಾತನ ಕಲೆಯನ್ನು ವಿಶ್ವಕ್ಕೆ ಪರಿಚಯಿಸಿದ ಭೀಮವ್ವ ಈ ಅತ್ಯುನ್ನತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಭೀಮವ್ವ ಅವರು 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ತಮ್ಮ ಕುಲಕಸುಬಾಗಿ ಮಾಡಿಕೊಂಡು ಬಂದವರು. ಅವರ ಕಲೆ ಗುರುತಿಸಿ ಕೇಂದ್ರ ಸರ್ಕಾರ ಈ ಪ್ರಶಸ್ತಿ ನೀಡಿ ಗೌರವಿಸಿದೆ.