ಬೆಂಗಳೂರು: ನಗರದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಮರವೊಂದು ಧರೆಗೆ ಉರುಳಿದಿದೆ.
ಭೂಮಿಯ ತೇವಾಂಶಕ್ಕೆ ಬೃಹತ್ ಗಾತ್ರದ ಮರವೊಂದು ಧರೆಗೆ ಉರುಳಿದೆ. ಕಲ್ಕೆರೆ ಸಮೀಪದ ಹೊರಮಾವು ಗ್ರಾಮದ ಬಳಿ ಈ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ 7:15ರ ಸುಮಾರಿಗೆ ಈ ಘಟನೆ ನಡೆದಿದೆ. ಸುಮಾರು 50 ವರ್ಷಕ್ಕೂ ಹೆಚ್ಚು ಹಳೆಯದಾದ ಬೃಹತ್ ಗಾತ್ರದ ಅರಳಿಮರ ಧರೆಗೆ ಉರುಳಿದೆ.
ಘಟನೆಯಲ್ಲಿ ಎರಡು ಕಾರು ಹಾಗೂ ಎರಡು ಬೈಕ್ ಗಳಿಗೆ ಹಾನಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ನೆಲಕ್ಕೆ ಬಾಗಿವೆ. ಮರ ಬಿದ್ದಿದ್ದರಿಂದಾಗಿ ದೇವಸ್ಥಾನ, ಪೆಟ್ಟಿಗೆ ಅಂಗಡಿಗೂ ಹಾನಿಯಾಗಿದೆ. ಪರಿಣಾಮ ಸುತ್ತಲೂ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಬಿಬಿಎಂಪಿ ಸಿಬ್ಬಂದಿ ಆಗಮಿಸಿದ್ದು, ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.