ಬೆಂಗಳೂರು: ಕಾಮುಕನೋರ್ವ ಮಹಿಳೆಯರನ್ನು ತಬ್ಬಿ ತುಟಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದಾನೆಂಬ ಆರೋಪವೊಂದು ಕೇಳಿ ಬಂದಿದೆ.
ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿರುವ ಕುರಿತು ವರದಿಯಾಗಿದೆ. ಒಂದೇ ದಿನ ಒಂದೇ ಸಮಯಲ್ಲಿ ಇಬ್ಬರು ಮಹಿಳೆಯರೊಂದಿಗೆ ಅಸಭ್ಯ ವರ್ತನೆ ನಡೆಸಿರುವ ಆರೋಪ ಕೇಳಿ ಬಂದಿದೆ. ಕೂಕ್ ಟೌನ್ ನ ಮಿಲ್ಟನ್ ಪಾರ್ಕ್ ಬಳಿ ವ್ಯಕ್ತಿ ದುರ್ವರ್ತನೆ ತೋರಿದ್ದಾನೆ ಎನ್ನಲಾಗಿದೆ.
ಜೂ. 6ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಟುಂಬದ ಜೊತೆಗೆ ವಾಕ್ ಗೆ ಬಂದಿದ್ದ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನಂತರ ಪಾರ್ಕ್ ನಲ್ಲಿ ಇದ್ದ ಮತ್ತೋರ್ವ ಮಹಿಳೆಯನ್ನು ಬಲವಂತವಾಗಿ ತಬ್ಬಿಕೊಂಡು ತುಟಿಗೆ ಮುತ್ತಿಕ್ಕಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ಸದ್ಯ ಪುಲಕೇಶಿ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.