ಕಾರವಾರ: ಮಹಿಳೆ ಸ್ನಾನ ಮಾಡುವ ವಳೆ ಯುವಕ ಇಣುಕಿ ನೋಡಿದ್ದಾನೆಂಬ ಆರೋಪ ಕೇಳಿ ಬಂದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕೆಳಗಿನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಕಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೆಳಗಿನೂರು ಗ್ರಾಪಂ ವ್ಯಾಪ್ತಿಯಲ್ಲಿನ ನಾಜಗಾರಿನ ಯೋಗೇಶ್ ಗಣಪ್ಪಯ್ಯ ಗೌಡ ಬಂಧಿತ ಆರೋಪಿ ಎನ್ನಲಾಗಿದೆ.
ಬಂಧಿತ ಆರೋಪಿ ಕೊಟ್ಟಿಗೆ ಮನೆಗೆ ತಾಗಿ ಇರುವ ಬಚ್ಚಲು ಕೋಣೆಗೆ ಅಕ್ರಮವಾಗಿ ನುಗ್ಗಿ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ್ದಾನೆ ಎನ್ನಲಾಗಿದೆ. ಈ ಕುರಿತು ಮಹಿಳೆ ಮಂಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿಂದೆ ಕೂಡ ಬಂಧಿತನ ವಿರುದ್ಧ ದೂರು ದಾಖಲಾಗಿತ್ತು. ಮಹಿಳೆಯ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.