ನೆಲಮಂಗಲ: ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ನೆಲಮಂಗಲದ (Nelamangala) ಬಿನ್ನಮಂಗಲ ಟೋಲ್ ಹತ್ತಿರ ಈ ಘಟನೆ ನಡೆದಿದೆ. ನೆಲಮಂಗಲದಿಂದ ತುಮಕೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಬೈಕ್ ಗೆ ಟಿಟಿ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಟಿಟಿ ವಾಹನದ ಚಾಲಕ ಅಪಘಾತದ ನಂತರ ಪರಾರಿಯಾಗಿದ್ದಾನೆ ಎನ್ನಾಲಾಗಿದೆ. ನೆಲಮಂಗಲ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.