ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತೆ ಜೈಲು ಸೇರಿ ಎರಡು ತಿಂಗಳು ಕಳೆಯುತ್ತಿದೆ. ಇತ್ತೀಚೆಗೆ ಹಾಸಿಗೆ ದಿಂಬು ಕೊಡಿ ಎಂದು ಕೋರ್ಟ್‌ಗೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಇದನ್ನು ಕೋರ್ಟ್ ಪುರಸ್ಕರಿಸಿತ್ತು.
ಇದೀಗ ಮತ್ತೆ ನಟ ದರ್ಶನ್ ಬೆನ್ನು ನೋವು ಸಮಸ್ಯೆ ಹೇಳಿ ಜೈಲಾಧಿಕಾರಿಗೆ ದೂರು ನೀಡಿದ್ದಾರೆ. ಬೆನ್ನು ನೋವು ಎಂದು ನಾಲ್ಕು ದಿನಗಳ ಹಿಂದೆ ಜೈಲಾಧಿಕಾರಿಗೆ ದರ್ಶನ್ ದೂರು ಸಲ್ಲಿಸಿದ್ದಾರೆ.
ಈ ಬಗ್ಗೆ ಪ್ರತಿದಿನ ಜೈಲಾಧಿಕಾರಿ ದರ್ಶನ್ ಹೆಲ್ತ್ ರಿಪೋರ್ಟ್ ಪಡೆಯುತ್ತಿದ್ದಾರೆ. ಅಲ್ಲದೇ ಜೈಲಿಗೆ ಸೇರಿ ಎರಡು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಬೆನ್ನು ನೋವಿನ ಸಮಸ್ಯೆ ಬಗ್ಗೆ ಜೈಲಾಧಿಕಾರಿಗಳ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದರ್ಶನ್ಗೆ ಜೈಲಿನ ವೈದ್ಯರೇ ತಪಾಸಣೆ ಮಾಡಿ ಬೆನ್ನು ನೋವಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.