‘ಸೀತಾ ವಲ್ಲಭ’ (Seetha Vallabha) ಸೀರಿಯಲ್ ನಟಿ ಸುಪ್ರೀತಾ ಸತ್ಯನಾರಾಯಣ್ (Supritha Sathyanarayan) ಚಂದನ್ ಶೆಟ್ಟಿ (Chandan Shetty) ಜೊತೆ ಎಂಗೇಜ್ ಆಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ಹೊಸ ಚಾಪ್ಟರ್ ಇಲ್ಲಿಂದ ಶುರು. ಹಲೋ ಎನ್ನುವ ನಿನ್ನ ಧ್ವನಿಯಿಂದಲೇ ಪ್ರೀತಿ ಶುರುವಾದ ಬಗ್ಗೆ ಹೇಳಲಾ ಅಥವಾ ನಿನ್ನ ನಗು ನೋಡಿದಾಗ ನನ್ನ ಹೊಟ್ಟೆಯೊಳಗಡೆ ಚಿಟ್ಟೆ ಹಾರಾಟ ಮಾಡೋ ಬಗ್ಗೆ ಹೇಳಲಾ? ನಿನ್ನ ನಗು ಅಂದ್ರೆ ನನಗೆ ತುಂಬ ಇಷ್ಟ. ಆ ನಗುಗೋಸ್ಕರ ನಾನು ಏನು ಬೇಕಿದ್ರೂ ಮಾಡುವೆ. ಖುಷಿಗೋಸ್ಕರ ನಾನು ದೇವರ ಬಳಿ ಪ್ರಾರ್ಥಿಸಿದೆ. ಅವನು ನನಗೆ ನಿಮ್ಮನ್ನು ಕೊಟ್ಟ. ನನ್ನ ಜೀವನಕ್ಕೆ ಬಂದಿದ್ದಕ್ಕೆ, ನಿಜವಾದ ಲವ್ ಏನು ಎಂದು ಅರ್ಥ ಮಾಡಿಸಿದ್ದಕ್ಕೆ, ನನ್ನ ಜೀವನವನ್ನು ಸುಂದರ ಮಾಡಿದ್ದಕ್ಕೆ ಥ್ಯಾಂಕ್ಯೂ ಎಂದು ಬರೆದುಕೊಂಡು ಸಂತಸ ಪಟ್ಟಿದ್ದಾರೆ.
ನಿನ್ನ ನಗು, ಶಾಂತಿ, ಖುಷಿಗೋಸ್ಕರ ನಾನು ಪ್ರಾಮೀಸ್ ಮಾಡುವೆ. ನಿನ್ನ ಜೀವನದುದ್ದಕ್ಕೂ ಇರುವೆ ಎಂದು ಮಾತುಕೊಡ್ತೀನಿ. ಇಬ್ಬರೂ ಒಟ್ಟಿಗೆ ಜೀವನ ಕಳೆಯೋಣ. ಐ ಲವ್ ಯೂ ಕಂದ. ನನ್ನ ಹೃದಯ ನಿನ್ನದು. ನನ್ನ ಎದೆಯಾಳೋ ಧಣಿ ನೀನೇ, ನಿನ್ನ ಸಹಚಾರಿಣಿ ನಾನೇ ಎಂದು ನಟಿ ಪೋಸ್ಟ್ ನಲ್ಲಿ ಹೇಳಿದ್ದಾರೆ. ಅಲ್ಲದೇ, ಭಾವಿ ಪತಿಯ ಫೋಟೋ ಶೇರ್ ಮಾಡಿದ್ದಾರೆ. ಡಿಜಿಟಲ್ ಕ್ರಿಯೇಟರ್, ಸಾಫ್ಟ್ವೇರ್ ಉದ್ಯೋಗಿ ಚಂದನ್ ಶೆಟ್ಟಿಯನ್ನು ವಿವಾಹವಾಗಲು ನಟಿ ನಿರ್ಧರಿಸಿದ್ದಾರೆ.