ಬೆಂಗಳೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಇಡೀ ಬೆಂಗಳೂರು ನೆನೆದು ಹೋಗಿದೆ. ಇಡೀ ಬೆಂಗಳೂರು ನೀರಿನಲ್ಲಿ ಮುಳುಗಿ ಹೋದಂತೆ ಭಾಸವಾಗುತ್ತಿದೆ. ಹಲವೆಡೆ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಈ ಮಧ್ಯೆ ರಾಜಧಾನಿಗೆ ಹವಾಮಾನ ಇಲಾಖೆ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಿದೆ.
ಸೋಮವಾರ ಬೆಳಗ್ಗೆ ಕೂಡ ಮಳೆರಾಯ ಸುರಿಯುತ್ತಿದ್ದಾನೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಗುರುವಾರದವರೆಗೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.