ರೆಬೆಲೆ ಸ್ಟಾರ್ ಅಂಬರೀಷ್ ಮನೆಯಲ್ಲಿ ಸಂತಸದ ವಾತಾವರಣ ಮನೆ ಮಾಡಿದ್ದು, ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ್ಪ ತಂದೆ-ತಾಯಿ ಆಗಿದ್ದಾರೆ.
ಅವಿವಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿನ ಜೊತೆ ಸುಮಲತಾ ಅಂಬರೀಷ್ ಅವರು ಪೋಸ್ ಕೊಟ್ಟಿರುವ ಫೋಟೋ ವೈರಲ್ ಆಗಿದೆ. ಸದ್ಯ ತಾಯಿ ಹಾಗೂ ಮಗು ಆರೋಗ್ಯವಾಗಿದೆ ಎನ್ನಲಾಗಿದೆ.
ಅಭಿಷೇಕ್ ಹಾಗೂ ಅವಿವಾ ಅವರು 2023ರಲ್ಲಿ ಮದುವೆಯಾಗಿದ್ದರು. ಈ ವರ್ಷದ ಅಂತ್ಯದ ವೇಳೆಗೆ ದಂಪತಿ ಖುಷಿ ಸುದ್ದಿ ನೀಡಿದ್ದಾರೆ.
ಅವಿವಾ ಗರ್ಭಿಣಿಯಾಗಿರುವ ಸುದ್ದಿ ಇತ್ತೀಚೆಗಷ್ಟೇ ವೈರಲ್ ಆಗಿತ್ತು. ಅವರ ಸೀಮಂತಶಾಸ್ತ್ರ ಕೂಡ ಅದ್ದೂರಿಯಾಗಿ ನಡೆದಿತ್ತು. ಈಗ ಅವರು ಗಂಡು ಮಗುವಿನ ತಾಯಿ ಆಗಿದ್ದಾರೆ. ‘ಅಂಬಿ ಮತ್ತೆ ಹುಟ್ಟಿ ಬಂದ’ ಎಂದು ಅಂಬರೀಷ್ ಅಭಿಮಾನಿಗಳು ಕಮೆಂಟ್ ಮಾಡಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.