ಪಶ್ಚಿಮ ಘಟ್ಟದಲ್ಲಿ ವರುಣಾರ್ಭಟ ಮುಂದುವರೆದಿರುವ ಹಿನ್ನೆಲೆಯಲ್ಲಿ ಅಂಬೋಲಿ ಫಾಲ್ಸ್ ದುಮ್ಮಿಕ್ಕುತ್ತಿದೆ.
ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯಲ್ಲಿ ಇರುವ ಅಂಬೋಲಿ ಫಾಲ್ಸ್ ತುಂಬಿ ಹರಿಯುತ್ತಿದ್ದು, ಈ ಜಲವೈಭವ ನೋಡಲು ಪ್ರವಾಸಿಗ ದಂಡು ಹರಿದು ಬರುತ್ತಿದೆ. ಮುಖ್ಯ ರಸ್ತೆಯ ಪಕ್ಕದಲ್ಲಿಯೇ ಅಂಬೋಲಿ ಫಾಲ್ಸ್ ಇರುವ ಹಿನ್ನೆಲೆಯಲ್ಲಿ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕರ್ನಾಟಕ, ಮಹಾರಾಷ್ಟ್ರದಿಂದ ಸಾವಿರಾರು ಪ್ರಯಾಣಿಕರು ದೌಡಾಯಿಸುತ್ತಿದ್ದಾರೆ. ಸ್ಥಳೀಯ ಪೊಲೀಸರು ಅಪಾಯದ ಎಚ್ಚರಿಕೆ ನೀಡಿದ್ದಾರೆ.