ಹಾಸನ: ಜಿಲ್ಲೆಯಲ್ಲಿ ಹೃದಯಾಘಾತ ಸಾವಿನ ಸರಣಿ ಮುಂದುವರೆದಿದ್ದು, ಇಂದು ಮತ್ತೋರ್ವ ಯುವಕ ಬಲಿಯಾಗಿದ್ದಾರೆ.
ಬೇಲೂರು ತಾಲ್ಲೂಕಿನ ಮಾದಿಹಳ್ಳಿಯ ರವಿಕುಮಾರ್ (30) ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಯಕಶೆಟ್ಟಿಹಳ್ಳಿಯಲ್ಲಿ ಹಠಾತ್ ಕುಸಿದುಬಿದ್ದು ರವಿಕುಮಾರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ರವಿಕುಮಾರ್ ಮನೆಗೆ ತರಕಾರಿ ತರಲೆಂದು ಪತ್ನಿಯ ತವರು ಮನೆಗೆ ರವಿ ಹೋಗಿದ್ದರು ಎನ್ನಲಾಗಿದೆ. ಆದರೆ, ಮನೆಯೊಳಗೆ ಹೋಗುತ್ತಿದ್ದಂತೆ ಕುಸಿದಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
ರವಿಕುಮಾರ್ ಮೂರು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎನ್ನಲಾಗಿದೆ. ಯಾವುದೇ ಅನಾರೋಗ್ಯ ಇಲ್ಲದೆ ಆರೋಗ್ಯದಿಂದಲೇ ರವಿ ಇದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ. ಆದರೆ, ಈ ಹಠಾತ್ ಸಾವಿನಿಂದಾಗಿ ಕುಟುಂಬಸ್ಥರು ಹಾಗೂ ಜನರು ಬೆಚ್ಚಿ ಬಿದ್ದಿದ್ದಾರೆ.