ಬೆಂಗಳೂರು: ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಶಾಕ್ ನೀಡಲು ಮುಂದಾಗಿದೆ.
ಪ್ರೀಮಿಯಂ ಅಥವಾ ಇತರ ಬಿಯರ್ ಬ್ರಾಂಡ್ಗಳ ಬೆಲೆ ಹೆಚ್ಚಳಕ್ಕೆ ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೂರನೇ ಬಾರಿಗೆ ಬಿಯರ್ ದರ ಏರಿಕೆ ಮಾಡಲಾಗುತ್ತಿದೆ.
ಪ್ರತಿ ಬಾಟಲಿಗೆ 10 ರಿಂದ 15 ರೂ. ಏರಿಕೆ ಮಾಡುವ ನಿರೀಕ್ಷೆ ಇದೆ. ಎಇಡಿ ಶೇ. 10 ರಷ್ಟು ಏರಿಕೆಗೆ ಕರಡು ಅಧಿಸೂಚನೆ ಹೊರಡಿಸಲಾಗುತ್ತಿದೆ. ರಾಜ್ಯದಲ್ಲಿ ಸದ್ಯ ಬಿಯರ್ ಮೇಲಿನ ಎಇಡಿಯು ಉತ್ಪಾದನಾ ವೆಚ್ಚದ ಶೇ. 195 ರಷ್ಟಿದೆ. ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ. 205ಕ್ಕೆ ಹೆಚ್ಚಿಸುವ ಬಗ್ಗೆ ಹೊಸ ಕರಡು ಅಧಿಸೂಚನೆ ಹೊರಡಿಸಲಾಗುತ್ತಿದೆ. ಬಿಯರ್ ಬ್ರ್ಯಾಂಡ್ಗಳ ಬೆಲೆಯು ಉತ್ಪಾದನಾ ವೆಚ್ಚವನ್ನು ಅವಲಂಬಿಸಿ ಸರಾಸರಿ 10 ರಿಂದ 15 ರೂ. ಏರಿಕೆ ಮಾಡಬಹುದು ಎಂಬ ನಿರೀಕ್ಷೆ ಇದೆ.
ಈಗಾಗಲೇ ಜನರು ಬೆಲೆ ಏರಿಕೆಗೆ ತತ್ತರಿಸಿ ಹೋಗಿದ್ದಾರೆ. ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಮಧ್ಯೆಯೇ ಈ ರೀತಿ ಬಿಯರ್ ದರ ಏರಿಕೆ ಮಾಡುತ್ತಿರುವುದು ಕೂಡ ಮದ್ಯ ಪ್ರಿಯರಿಗೆ ಶಾಕ್ ನೀಡುತ್ತಿದೆ.