ಹಾಸನ: ಜಿಲ್ಲೆಯಲ್ಲಿ ಹೃದಯಾಘತ ಪ್ರಕರಣಗಳು ಮತ್ತೆ ಮುಂದುವರೆದಿದ್ದು, ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ.
ಹಠಾತ್ ಹೃದಯಾಘಾತಕ್ಕೆ ಮಹಿಳೆ ಲೇಪಾಕ್ಷಿ (50) ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ ಮನೆಯಲ್ಲಿದ್ದ ವೇಳೆ ದಿಢೀರ್ ಆಗಿ ಮಹಿಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಬೇಲೂರಿನ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಳೆದ 40 ದಿನಗಳಲ್ಲಿ 19 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸರಣಿ ಸಾವಿನಿಂದಾಗಿ ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.