ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ ತಡೆದಾಗ ನನ್ನ ಮೇಲೆ ಹಲ್ಲೆ ನಡೆಸಿ ಪೊಲೀಸರು ಬಂಧಿಸಿದ್ದಾರೆಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.
ಮೈಮೇಲೆ ಗಾಯ ತೋರಿಸಿ ಪೊಲೀಸರು ದೌರ್ಜನ್ಯ ಮಾಡಿದ್ದಾರೆಂದು ರೇಣುಕಾಚಾರ್ಯ ಆರೋಪಿಸಿದ್ದಾರೆ. ರೈತರ ಮೇಲೆ ಕೂಡ ಹಲ್ಲೆ ನಡೆಸಿದ್ದಾರೆ. ದಾವಣಗೆರೆ ಡಿಎಆರ್ ಗ್ರೌಂಡ್ ನಲ್ಲಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಭದ್ರಾ ಬಲದಂಡೆ ಸೀಳಿ ಕಾಮಗಾರಿ ವಿರೋಧಿಸಿ ನಡೆಯುತಿದ್ದ ಹೆದ್ದಾರಿ ಬಂದ್ ವೇಳೆ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ವೇಳೆ ವೇಳೆ ರೈತರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದ್ದಾರೆ.