ದಾವಣಗೆರೆ: ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಖದೀಮರು ಯತ್ನಿಸಿ ನಂತರ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದಕ್ಕೆ ಪರಾರಿಯಾಗಿರುವ ಘಟನೆ ನಡೆದಿದೆ.
ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಿಳಿಚೋಡು ಗ್ರಾಮದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದ ಖದೀಮರು, ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದಿದ್ದಾಗ ಪೆಟ್ರೋಲ್ ಸುರಿದಿದ್ದಾರೆ. ಆ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿ ದಟ್ಟ ಹೊಗೆ ಆವರಿಸುತ್ತಿದ್ದಂತೆ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕುರಿತು ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.