ಚಿತ್ರದುರ್ಗ: ಎರಡು ಬಸ್‍ಗಳ ಮಧ್ಯೆ ಆಟೋ ಸಿಲುಕಿ ಅಪ್ಪಚ್ಚಿಯಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದ ಬಸ್ ನಿಲ್ದಾಣದ ಬಳಿ ನಡೆದಿದೆ.
ಆಟೋಗೆ ಹಿಂಭಾಗದಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅದು ಮುಂದೆ ಹೋಗುತ್ತಿದ್ದ ಸಾರಿಗೆ ಬಸ್ ಗೆ ಡಿಕ್ಕಿಯಾಗಿ ಎರಡೂ ಬಸ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ಪರಿಣಾಮ ಆಟೋ ಚಾಲಕ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.