ಮಂಗಳೂರು: ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್(Cooperative Bank) ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬ್ಯಾಂಕ್ ನಲ್ಲಿ ಸುಮಾರು 10ರಿಂದ 12 ಕೋಟಿ ರೂ. ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಮಂಗಳೂರು ಪೊಲೀಸರು(police) ಕಾರ್ಯಚರಣೆ ನಡೆಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್(Anupam Aggarwal) ಈ ವಿಷಯ ಖಚಿತ ಪಡಿಸಿದ್ದಾರೆ. ತಮಿಳುನಾಡು ಮೂಲದ ಮುರುಗಂಡಿ ದೇವರ್, (Murugandi Dewar) ಪ್ರಕಾಶ್ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಂಧಿತರು ಎನ್ನಲಾಗಿದೆ.