ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Akhila Bharata Kannada Sahitya Sammelana) ಅಧ್ಯಕ್ಷರಾಗಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ (Banu Mushtaq) ಆಯ್ಕೆಯಾಗಿದ್ದಾರೆಆಯ್ಕೆಯಾಗಿದ್ದಾರೆ
ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ನೇತೃತ್ವದಲ್ಲಿ ಬಳ್ಳಾರಿಯಲ್ಲಿ (Ballari) ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಪದಾಧಿಕಾರಿಗಳು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.
ಇತ್ತೀಚೆಗಷ್ಟೇ ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿ ಪತಾಕೆ ಹಾರಿಸಿರುವ ಬಾನು ಮಷ್ತಾಕ್ ಅವರಿಗೆ ಇದೀಗ ಮತ್ತೊಂದು ಗೌರವ ಸಿಕ್ಕಿದೆ.