ಮೈಸೂರು: ಸಾಹಿತಿ ಬಾನು ಮುಷ್ತಾಕ್ ಅವರು ನಿನ್ನೆ ಮೈಸೂರು ದಸರಾವನ್ನು ಉದ್ಘಾಟನೆ ಮಾಡಿದ್ದು ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಶ್ರೀವತ್ಸವ ಬಾನು ಮುಷ್ತಾಕ್ ಅವರು ನಮ್ಮ ಸಂಪ್ರದಾಯಂತೆ ನಡೆದುಕೊಂಡಿದ್ದಾರೆ ಎಂದು ಹೇಳಿದರು.

ನಗರದಲ್ಲಿ ಮಾತಾಡಿದ ಅವರು ಬಾನು ಮುಷ್ತಾಕ್ ಅವರಿಗೆ ಮೈಸೂರು ದಸರಾ ಉದ್ಘಾಟನೆಗೆ ನಾವು ವಿರೋಧಿಸಿಲ್ಲ, ಅವರು ಈ ಹಿಂದೆ ತಾಯಿ ಭುವನೇಶ್ವರಿ ಕುರಿತು ಮಂಡ್ಯದಲ್ಲಿ ಹೇಳಿಕೆ ನೀಡಿದ್ದರ ಬಗ್ಗೆ ನಾವು ವಿರೋಧ ವ್ಯಕ್ತಪಡಿಸಿದ್ದೆವು. ಧರ್ಮದ ವಿಚಾರವಾಗಿ ನಾವು ಬಾನು ಮುಷ್ತಾಕ್‌ರನ್ನು ವಿರೋಧಿಸಿಲ್ಲವೆಂದು ಸ್ಪಷ್ಟನೆ ನೀಡಿದರು.

ಬಾನು ಮುಷ್ತಾಕ್ ಅವರು ನಮ್ಮ ಸಂಪ್ರದಾಯದಂತೆ ನಡೆದುಕೊಂಡಿದ್ದಾರೆ. ನಿನ್ನೆ ಯಾವುದೇ ವಿರೋಧ ವ್ಯಕ್ತವಾಗದಂತೆ ದಸರಾ ಉದ್ಘಾಟಿಸಿದ್ದಾರೆಂದು ಬಿಜೆಪಿ ಶಾಸಕ ಶ್ರೀವತ್ಸ ಹೇಳಿದ್ದಾರೆ.

ಬಿಜೆಪಿ ಗುರಿಯಾಗಿಸಿಕೊಂಡು ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು 10 ದಿನಗಳ ನಾಡ ಹಬ್ಬದಲ್ಲಿ ರಾಜಕೀಯ ಹೊರತುಪಡಿಸಿ ದಸರಾ ಮಾಡಲಿ ಎನ್ನುವುದು ನನ್ನ ಆಶಯ. ಇದರ ಬಗ್ಗೆ ನಾನು ಹೆಚ್ಚು ಕಾಮೆಂಟ್ ಮಾಡುವುದಿಲ್ಲ. ದಸರಾ ಮುಗಿದ ಬಳಿಕ ಈ ಬಗ್ಗೆ ಮಾತಾಡುತ್ತೇನೆ ಎಂದು ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಹೇಳಿದ್ದಾರೆ.