ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಮಳೆಯೊಂದಿಗೆ ಡೆಂಗ್ಯೂ ಪ್ರಕರಣಗಳು ಕೂಡ ಹೆಚ್ಚಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ.
ಈಗಾಗಲೇ ರಾಜ್ಯದಲ್ಲಿ 2 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಜ. 1ರಿಂದ ಜೂನ್ 17ರ ವರೆಗೆ 2,075 ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲೇ ಅತೀ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 1,041ಪ್ರಕರಣಗಳು ವರದಿಯಾಗಿವೆ. ಬಿಬಿಎಂಪಿ ಹೊರತು ಪಡಿಸಿ ರಾಜ್ಯದಾದ್ಯಂತ 1.034 ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಡೆಂಗ್ಯೂ ಜೊತೆಗೆ ಚಿಕನ್ ಗುನ್ಯಾ ಪ್ರಕರಣಗಳು ಕೂಡ ಬೆಳಕಿಗೆ ಬರುತ್ತಿವೆ. ಬೆಂಗಳೂರಿನಲ್ಲಿ 66 ಹಾಗೂ ರಾಜ್ಯದಾದ್ಯಂತ 362 ಚಿಗನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.