75 ವರ್ಷಕ್ಕೆ ರಾಜಕೀಯ ನಿವೃತ್ತಿ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿರುವ ಹೇಳಿಕೆ ಈಗ ದೊಡ್ಡ ವೈರಲ್ ಆಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು 75ನೇ ವಸಂತ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಆ ಹೇಳಿಕೆ ಮಹತ್ವ ಪಡೆದಿದೆ. ಆರೆಸ್ಸೆಸ್ ಚಿಂತಕ ಮೊರೋಪಂತ್ ಪಿಂಗಳೆ ಅವರ ಸ್ಮರಣಾರ್ಥ ನಾಗ್ಪುರದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್, 75ನೇ ವರ್ಷಕ್ಕೆ ಕಾಲಿಡುವುದು ಪ್ರಕೃತಿಯು ವಿರಾಮ ತೆಗೆದುಕೊಂಡು ಇತರರಿಗೆ ದಾರಿ ಮಾಡಿಕೊಡುವ ಸಂಕೇತವಾಗಿದೆ ಎಂದು ಹೇಳಿದ್ದರು.
75 ವರ್ಷದ ನಂತರ ಶಾಲು ಹೊದಿಸಿ ಸನ್ಮಾನಿಸುವುದು ನಿವೃತ್ತಿ ಹೊಂದಲು ಮತ್ತು ಮುಂದಿನ ಪೀಳಿಗೆಗೆ ಅವಕಾಶ ಕಲ್ಪಿಸಲು ಸಜ್ಜಾಗಿರುವ ಸಮಯ ಎಂದು ಪಿಂಗಳೆ ಅವರ ಹಾಸ್ಯಮಯ ಕ್ಷಣವನ್ನು ನಪಿಸಿಕೊಂಡರು ಎಂದು ದಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಹೀಗಾಗಿ ಈ ಹೇಳಿಕೆ ಈಗ ವೈರಲ್ ಆಗುತ್ತಿದೆ.