ಬೆಂಗಳೂರು: ನಗರದಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಸಾಕಷ್ಟು ಅವಾಂತರಗಳು ಸಂಭವಿಸಿವೆ.
ಸಿಲಿಕಾನ್ ಸಿಟಿಯಲ್ಲಿ ಬುಧವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಸಂಜೆ ಹಲವೆಡೆ ಭಾರೀ ಮಳೆಯಾಗಿದ್ದರೆ, ಹಲವೆಡೆ ಅಲ್ಪ ಪ್ರಮಾಣದಲ್ಲಿ ಮಳೆಯಾಗಿದೆ. ಹೀಗಾಗಿ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.
ನಗರದ ಇನ್ಫೆಂಟ್ರಿ ರಸ್ತೆಯಲ್ಲಿ ಭಾರೀ ಗಾತ್ರದ ಮರ ಬಿದ್ದಿದೆ. ಮಳೆ ಆರಂಭವಾಗುತ್ತಿದ್ದಂತೆ ಧರೆಗೆ ಮರ ಉರುಳಿದೆ. ಅದೃಷ್ಟವಶಾತ್ ಅನಾಹುತ ತಪ್ಪಿದೆ. ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರ ಇರಲಿಲ್ಲ. ಹೀಗಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಬಿಬಿಎಂಪಿ ಸಿಬ್ಬಂದಿ ಮರ ತೆರವುಗೊಳಿಸಿದ್ದಾರೆ.